×
Ad

ಚಿಕ್ಕಮಗಳೂರು: ಎರಡು ಕೆಎಸ್ಸಾರ್ಟಿಸಿ ಬಸ್‌ ಗಳು ಮುಖಾಮುಖಿ ಢಿಕ್ಕಿ; ಹಲವರಿಗೆ ಗಾಯ

Update: 2023-12-10 15:43 IST

ಚಿಕ್ಕಮಗಳೂರು: ಎರಡು ಕೆಎಸ್ಸಾರ್ಟಿಸಿ ಬಸ್ ಗಳು ಮುಖಾಮುಖಿ ಢಿಕ್ಕಿಯಾಗಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮೂಡಿಗೆರೆ ಸಮೀಪದ ಘಟ್ಟದ ಹಳ್ಳಿಯಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ.

ಮೂಡಿಗೆರೆಯಿಂದ ಬೇಲೂರಿಗೆ ಹೋಗುತ್ತಿದ್ದ ಹಾಗೂ ಬೇಲೂರಿನಿಂದ ಮೂಡಿಗೆರೆಗೆ ಬರುತ್ತಿದ್ದ ಬಸ್ ಗಳ ನಡುವೆ ಅಪಘಾತವುಂಟಾಗಿದೆ. ಎರಡು ಬಸ್ ಗಳಲ್ಲಿದ್ದ ಸುಮಾರು 20 ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳೀಯರು ಮತ್ತು ಆಂಬುಲೆನ್ಸ್ ಚಾಲಕರ ಸಹಾಯದಿಂದ ಗಾಯಾಳುಗಳನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಸಾಗಿಸಲಾಗಿದೆ. ಇದರಲ್ಲಿ ಗಂಭೀರ ಗಾಯಗೊಂಡ ಕೆಲವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದು ಅವರನ್ನು ಬೇರೆಡೆಗೆ ಚಿಕಿತ್ಸೆಗೆ ಕರೆದೊಯ್ಯುವ ಸಾಧ್ಯತೆ ಇದೆ ಎನ್ನಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News