×
Ad

ಮೂಡಿಗೆರೆ | ಹುಲಿ ಉಗುರು ಧರಿಸಿದ್ದ ಆರೋಪ; ಇಬ್ಬರ ಬಂಧನ

Update: 2023-10-24 11:21 IST

ಚಿಕ್ಕಮಗಳೂರು: ಹುಲಿ ಉಗುರು ಧರಿಸಿದ ಆರೋಪದಲ್ಲಿ ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಗ್ರಾಮದಲ್ಲಿ ಇಬ್ಬರನ್ನು  ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವುದು ವರದಿಯಾಗಿದೆ. 

ಸತೀಶ್, ರಂಜಿತ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಹುಲಿ ಉಗುರು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆನ್ನಲಾಗಿದೆ. 

ಬಂಧಿತ ಆರೋಪಿಗಳಿಬ್ಬರು ಹುಲ್ಲೇಮನೆ, ಭಾರತೀಬೈಲು ಗ್ರಾಮದವರಾಗಿದ್ದು, ಬಂಧಿತರಿಂದ ಹುಲಿ ಉಗುರಿನ ಒಂದು ಡಾಲರ್ ಅನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ತಲೆ ಮರೆಸಿಕೊಂಡಿರುವ ಹುಲಿ ಉಗುರು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನಕ್ಕೆ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

 ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಬಿಗ್‌ ಬಾಸ್' ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ವರ್ತೂರು ಸಂತೋಷ್ ಅವರನ್ನು  ಬಿಗ್‌ ಬಾಸ್ ಮನೆಯಿಂದಲೇ ಅರಣ್ಯ ಇಲಾಖೆ ಅಧಿಕಾರಿಗಳು ರವಿವಾರ ರಾತ್ರಿ ಬಂಧಿಸಿದ್ದರು. ಇದೀಗ ಇದರ ಬೆನ್ನಲ್ಲೇ ಮತ್ತೊಂದು ಪ್ರಕರಣ ವರದಿಯಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News