×
Ad

ಚಿಕ್ಕಮಗಳೂರು ಎಸ್‌ಪಿ ಉಮಾ ಪ್ರಶಾಂತ್ ವರ್ಗಾವಣೆ; ನೂತನ ಎಸ್‌ಪಿಯಾಗಿ ಅಮಟೆ ವಿಕ್ರಂ ನೇಮಕ

Update: 2023-08-22 18:35 IST

 ಉಮಾ ಪ್ರಶಾಂತ್ | ಅಮಟೆ ವಿಕ್ರಮ್ 

ಚಿಕ್ಕಮಗಳೂರು, ಆ.22: ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದ್ದು, ಜಿಲ್ಲೆಯ ನೂತನ ಎಸ್ಪಿಯನ್ನಾಗಿ ಅಮಟೆ ವಿಕ್ರಮ್ ಅವರನ್ನು ನೇಮಿಸಲಾಗಿದೆ.

2021ನೇ ಸಾಲಿನ ಬ್ಯಾಚ್‍ನ ಐಪಿಎಸ್ ಅಧಿಕಾರಿ ಅಮಟೆ ವಿಕ್ರಮ್ ಅವರನ್ನು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯುಕ್ತಿಗೊಳಿಸಿ ರಾಜ್ಯ ಸರಕಾರದ ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ನಾಗಪ್ ಎಸ್ ಪರೀತ್ ಅವರು ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಉಮಾ ಪ್ರಶಾಂತ್ ಅವರನ್ನು ದಾವಣಗೆರೆ ಜಿಲ್ಲೆಯ ಎಸ್ಪಿಯನ್ನಾಗಿ ನಿಯುಕ್ತಿಗೊಳಿಸಲಾಗಿದೆ.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News