×
Ad

ಚಿಕ್ಕಮಗಳೂರು: ಗೃಹಿಣಿ ಅನುಮಾನಾಸ್ಪದ ಸಾವು, ಕೊಲೆ ಶಂಕೆ

Update: 2023-12-12 13:29 IST

ಚಿಕ್ಕಮಗಳೂರು:  ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಮನೆಯಲ್ಲಿ ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತ ಮಹಿಳೆಯನ್ನು ಶ್ವೇತಾ(31) ಎಂದು ಗುರುತಿಸಲಾಗಿದೆ. ಶ್ವೇತಾ ಅವರ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿರುವ ವೇಳೆ ಮಧ್ಯ ಪ್ರವೇಶಿಸಿದ ಕುಟುಂಬಸ್ಥರು ಇದು ಸಹಜ ಸಾವಲ್ಲ, ಪತಿಯೇ ಶ್ವೇತಾ ಅವರನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ, ಅಂತ್ಯ ಕ್ರಿಯೆಯನ್ನು ತಡೆದು ಶವ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದು ಬಂದಿದೆ.

ಶ್ವೇತಾ ಅವರ ಪತಿ ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಆತನೇ ಪಾಯಿಸನ್ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿರುವ ಬಗ್ಗೆ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ಶ್ವೇತಾ ಹಾಗೂ ದರ್ಶನ್  ಬೆಂಗಳೂರಿನಲ್ಲಿ ನೆಲೆಸಿದ್ದು, ನಾಲ್ಕು ದಿನಗಳ ಹಿಂದೆ  ದೇವವೃಂದಕ್ಕೆ ಬಂದಿದ್ದರು. ಈ ವೇಳೆ ಹಾರ್ಟ್ ಅಟ್ಯಾಕ್ ನಿಂದ ಶ್ವೇತಾ ಮೃತಪಟ್ಟಿದ್ದಾಳೆಂದು ಪತಿ ದರ್ಶನ್ ಆಕೆಯ ಕುಟುಂಬಕ್ಕೆ ತಿಳಿಸಿದ್ದ.

ದರ್ಶನ್ ಅನೈತಿಕ ಸಂಬಂಧ ಹೊಂದಿದ್ದು, ಇದಕ್ಕೆ ಪತ್ನಿ ಅಡ್ಡಿಯಾದ ಹಿನ್ನಲೆ ಇಂಜಕ್ಷನ್ ನೀಡಿ ಕೊಲೆ ಮಾಡಿರಬಹುದೆಂದು ಆರೋಪಿಸಿರುವ ಶ್ವೇತಾ ಕುಟುಂಬದವರು ತಾರತುರಿಯಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾದವರನ್ನು ತಡೆದು ಶವ ಪರೀಕ್ಷೆಗೆ ಚಿಕ್ಕಮಗಳೂರು ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News