×
Ad

ಚಿಕ್ಕಮಗಳೂರು: ಟ್ರ್ಯಾಕ್ಟರ್-ಕಾರು ಢಿಕ್ಕಿ; ಗಾಯಾಳು ಮೃತ್ಯು

Update: 2023-12-22 14:58 IST

ಚಿಕ್ಕಮಗಳೂರು: ಟ್ರ್ಯಾಕ್ಟರ್ ಮತ್ತು ಕಾರು ಮುಖಾಮುಖಿ ಢಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಯುವಕ ಮೃತಪಟ್ಟಿರುವ ಘಟನೆ ಮೂಡಿಗೆರೆ ಸಮೀಪದ ಮುತ್ತಿಗೆಪುರ ಎಂಬಲ್ಲಿ ನಡೆದಿದೆ.

ಮೃತ ಯುವಕನನ್ನು ಬೇಲೂರು ತಾಲ್ಲೂಕು ಚೀಕನಹಳ್ಳಿ ಗ್ರಾಮದ ಕೀರ್ತಿ(21) ಎಂದು ಗುರುತಿಸಲಾಗಿದೆ. ಮೂಡಿಗೆರೆ ಸಮೀಪದ ಚಿಕ್ಕಳ್ಳ ಎಂಬಲ್ಲಿ ಕಾಫಿ ಎಸ್ಟೇಟ್ ಒಂದರಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.‌

ಗುರುವಾರ ಮಧ್ಯಾಹ್ನ ಚೀಕನಹಳ್ಳಿ ತನ್ನ ಮನೆಯಿಂದ ಚಿಕ್ಕಳ್ಳದ ತೋಟಕ್ಕೆ ಮಾರುತಿ 800 ಕಾರಿನಲ್ಲಿ ತೆರಳುತ್ತಿದ್ದಾಗ ಹಾಂದಿ ಮೂಲದ ವ್ಯಕ್ತಿಗೆ ಸೇರಿದ ಟ್ರ್ಯಾಕ್ಟರ್ ಢಿಕ್ಕಿ ಹೊಡೆದಿದೆ. ಕಾರು ಚಾಲನೆ ಮಾಡುತ್ತಿದ್ದ ಕೀರ್ತಿಯ   ಸ್ಥಿತಿ ಗಂಭೀರವಾಗಿತ್ತು. ತಕ್ಷಣವೇ  ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಅಂಬುಲೆನ್ಸ್ ಮೂಲಕ ಕರೆದೊಯ್ಯುವ ದಾರಿಮಧ್ಯೆ ಯುವಕ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ತಂದು ಶುಕ್ರವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೃತ ಕೀರ್ತಿಯ ತಂದೆ ತಾಯಿ ಇಬ್ಬರೂ ಮರಣಹೊಂದಿದ್ದು, ಓರ್ವ ಸಹೋದರ ಮತ್ತು ಓರ್ವ ಸಹೋದರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News