×
Ad

ಜ್ವರ, ನೆಗಡಿ ಸೇರಿದಂತೆ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು: ಕೋವಿಡ್ ಕುರಿತು ರಾಜ್ಯ ಸರ್ಕಾರ ಎಚ್ಚರಿಕೆ

Update: 2023-12-27 19:20 IST

ಬೆಂಗಳೂರು: ಬೆಂಗಳೂರು: ಕೋವಿಡ್-19 ಸೋಂಕಿನ ನಿಯಂತ್ರಣ ಹಾಗೂ ನಿರ್ವಹಣೆ ಕುರಿತು ಪರಾಮರ್ಶೆ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಜ್ವರ, ನೆಗಡಿ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬಾರದು ಎಂದು ಸೂಚಿಸಲಾಗಿದೆ.

ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಸಚಿವ ದಿನೇಶ್ ಗುಂಡೂರಾವ್, "ಕೋವಿಡ್‌ ಭೀತಿಯ ಹಿನ್ನಲೆಯಲ್ಲಿ, ಮಕ್ಕಳಲ್ಲಿ ವೇಗವಾಗಿ ರೋಗ ಹರಡುವ ಸಾಧ್ಯತೆ ಇರುವುದರಿಂದ ಜ್ವರ, ನೆಗಡಿ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬಾರದು. ಮನೆಯಲ್ಲೇ ಸೂಕ್ತ ಆರೈಕೆ ಮಾಡಬೇಕು." ಎಂದು ಹೇಳಿದ್ದಾರೆ.

ಸಂಪುಟ ಉಪಸಮಿತಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು:

1. ಜ್ವರ, ನೆಗಡಿ, ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬಾರದು.

2. ಕೋವಿಡ್ ಪಾಸಿಟಿವ್ ಆದವರು ಕಡ್ಡಾಯವಾಗಿ ಏಳು ದಿನ ಹೋಮ್ ಐಸೊಲೇಷನ್ ನಲ್ಲಿರಬೇಕು.

3. ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳೂ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್ ರಚನೆಗೆ ನಿರ್ಧಾರ.

4. ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲಿ ಕೋವಿಡ್ ರೋಗಲಕ್ಷಣಗಳಿದ್ದರೆ ಕಡ್ಡಾಯ ಟೆಸ್ಟಿಂಗ್.

5. ಇತರೆ ಕಾಯಿಲೆ ಹೊಂದಿದವರಿಗೆ ಆದ್ಯತೆಯ ಮೇರೆಗೆ ವ್ಯಾಕ್ಸಿನ್ ನೀಡಲು ನಿರ್ಧಾರ.

6. ಹೊಸ ವರ್ಷಾಚರಣೆಗೆ ಸೇರಿದಂತೆ ಯಾವುದೇ ಕಾರ್ಯಕ್ರಮ ಅಥವಾ ಜನರ ಓಡಾಟಕ್ಕೆ ಸದ್ಯ ನಿರ್ಬಂಧವಿಲ್ಲ.

7. ಕೋವಿಡ್ ಪಾಸಿಟಿವ್ ಬಂದವರನ್ನು ಮಾತ್ರ ಸಿ.ಟಿ.ಸ್ಕ್ಯಾನಿಂಗ್ ಗೆ ಒಳಪಡಿಸಬೇಕು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News