×
Ad

ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಪ್ರಕರಣ; ಇಬ್ಬರು ಅಧಿಕಾರಿಗಳು ಸಿಐಡಿ ವಶಕ್ಕೆ

Update: 2023-08-20 14:57 IST

ಮಂಡ್ಯ, ಆ.20: ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಲಂಚ ಬೇಡಿಕೆ ಆರೋಪದ ಕುರಿತಾಗಿ ರಾಜ್ಯಪಾಲರಿಗೆ ಪತ್ರ ಬರೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕೃಷಿ ಅಧಿಕಾರಿಗಳನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವುದು ವರದಿಯಾಗದೆ. 

ವಶಡಿಸಿಕೊಂಡಿರುವ ಕೃಷಿ ಅಧಿಕಾರಿಗಳು ಕೆ ಆರ್ ಪೇಟೆ ಮೂಲದ ಶಿವಪ್ರಸಾದ್ ಹಾಗೂ ಗುರುದತ್ ಎಂದು ಗುರುತಿಸಲಾಗಿದ್ದು,ರಾಜ್ಯಪಾಲ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದವರು ಇವರೇ ಎಂಬ ಮಾಹಿತಿ ಬಂದ ಮೇರೆಗೆ ಸಿಐಡಿ ಅಧಿಕಾರಿಗಳು ಇವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಮಂಡ್ಯ ಜಿಲ್ಲೆಯ ಏಳು ಕೃಷಿ ಅಧಿಕಾರಿಗಳು ಸಚಿವ ಚೆಲುವರಾಯಸ್ವಾಮಿ ವಿರುದ್ಧ ಲಂಚದ ಬೇಡಿಕೆ ಆರೋಪದ ಕುರಿತಾಗಿ ರಾಜ್ಯಪಾಲರಿಗೆ ಈ ಕುರಿತು ಪತ್ರ ಬರೆದಿದ್ದರು.

ಈ ಪ್ರಕರಣ ರಾಜ್ಯಾದ್ಯಂತ ಭಾರಿ ವಿವಾದಕ್ಕೆ ಈಡಾಗಿತ್ತು. ಅಲ್ಲದೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಂತರ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ವಹಿಸಿತ್ತು. ಪತ್ರ ಇವರೇ ಬರೆದಿದ್ದಾರೆ ಎಂಬುದರ ಮಾಹಿತಿ ಬಂದ ಮೇರೆಗೆ ಇಬ್ಬರು ಕೃಷಿ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News