×
Ad

ಮಡಿಕೇರಿ ಶಾಸಕರ ನಗರ ಸಂಚಾರ: ತ್ಯಾಗರಾಜ ಕಾಲೋನಿ ಸಮಸ್ಯೆ ಆಲಿಸಿದ ಡಾ.ಮಂತರ್ ಗೌಡ

Update: 2023-08-19 18:40 IST

ಮಡಿಕೇರಿ ಆ.19 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಇಂದು ನಗರ ಸಂಚಾರ ಮಾಡಿದರು. ನಗರದ ತ್ಯಾಗರಾಜ ಕಾಲೋನಿಗೆ ಭೇಟಿ ನೀಡಿದ್ದ ಅವರು ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.

ಮಳೆಯಿಂದ ಹಾನಿಯಾದ ರಸ್ತೆ, ಚರಂಡಿ, ಮೋರಿ ವೀಕ್ಷಿಸಿದ ಅವರು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾನಿಯಾಗಿರುವ ರಸ್ತೆಯ ಸುರಕ್ಷತೆಗೆ ತಡೆಗೋಡೆ ನಿರ್ಮಿಸಲು ತಿಳಿಸಿದರು.

ಸ್ಥಳೀಯ ನಿವಾಸಿಗಳೊಂದಿಗೆ ಕುಂದುಕೊರತೆಗಳ ಕುರಿತು ಚರ್ಚಿಸಿದ ಶಾಸಕರು, ಶೀಘ್ರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.

ಈ ಸಂದರ್ಭ ಪೌರಾಯುಕ್ತ ವಿಜಯ, ಸಹಾಯಕ ಅಭಿಯಂತರ ರಂಗರಾಮ್, ಪರಿಸರ ಅಭಿಯಂತರ ಸೌಮ್ಯ, ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ನಗರಾಧ್ಯಕ್ಷ ಬಿ.ವೈ.ರಾಜೇಶ್, ಬೂತ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಯಾಕುಬ್, ನಗರಸಭಾ ಸದಸ್ಯರಾದ ಮೇರಿ ವೇಗಸ್, ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷೆ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ, ರೆಹಮಾನ್ ಖಾನ್, ನಗರ ಕಾಂಗ್ರೆಸ್, ಬೂತ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು. 




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News