ಬಿ.ಆರ್.ಪಾಟೀಲ್ ಆರೋಪಕ್ಕೆ ಸಿಎಂ ಹಾಗೂ ವಸತಿ ಸಚಿವರು ಸ್ಪಷ್ಟಣೆ ನೀಡುತ್ತಾರೆ: ಡಿ.ಕೆ. ಶಿವಕುಮಾರ್
Update: 2025-06-23 20:13 IST
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ಕೊಟ್ಟವರಿಗೆ ಮಾತ್ರ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಮಾಡಿರುವ ಆರೋಪಕ್ಕೆ ನಾನು ಏನು ಹೇಳಬೇಕೋ ಹೇಳಿದ್ದೇನೆ. ಉಳಿದಂತೆ ಈ ವಿಚಾರವಾಗಿ ಮುಖ್ಯಮಂತ್ರಿ ಹಾಗೂ ವಸತಿ ಸಚಿವರು ಸ್ಪಷ್ಟಣೆ ನೀಡುತ್ತಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬಿ.ಆರ್.ಪಾಟೀಲ್ ಮಾಡಿರುವ ಆರೋಪಕ್ಕೆ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಕೂಡ ಧ್ವನಿಗೂಡಿಸುತ್ತಿದ್ದಾರಲ್ಲ ಎಂದು ಸೋಮವಾರ ಸದಾಶಿವನಗರದಲ್ಲಿರುವ ಶಿವಕುಮಾರ್ ಅವರ ನಿವಾಸದ ಬಳಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಈ ಮೇಲಿನಂತೆ ಪ್ರತಿಕ್ರಿಯಿಸಿದರು.