×
Ad

ಸಿಎಂ-ಡಿಸಿಎಂ ಉಪಹಾರ ಸಭೆ | ಡಿಕೆಶಿ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ

Update: 2025-12-02 10:31 IST

ಬೆಂಗಳೂರು : ಅಧಿಕಾರ ಹಂಚಿಕೆ ವಿಚಾರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಡಿಸಿಎಂ ಡಿ ಕೆ ಶಿವಕುಮಾರ್‌ ಅವರ ಆಹ್ವಾನದಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು ಉಪಹಾರ ಸಭೆ ನಿಮಿತ್ತ ಸದಾಶಿವನಗರದಲ್ಲಿರುವ ಡಿಸಿಎಂ ನಿವಾಸಕ್ಕೆ  ಆಗಮಿಸಿದ್ದಾರೆ.  ‌ 

ಈ ವೇಳೆ ಡಿ ಕೆ ಸುರೇಶ್‌ ಅವರು ಸಿಎಂ ಅವರನ್ನು ಹೂಗುಚ್ಛ ನೀಡಿ ಸ್ವಾಗತಿಸಿದರು.

ಸೋಮವಾರ ಈ ಕುರಿತು ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದ ಡಿ.ಕೆ.ಶಿವಕುಮಾರ್, ‘ನಾನು ಮತ್ತು ಮುಖ್ಯಮಂತ್ರಿಗಳು ಒಂದು ತಂಡವಾಗಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ. ನಾವು ರಾಜ್ಯದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಲು ನಮ್ಮ ಸಾಮೂಹಿಕ ಪ್ರಯತ್ನಗಳನ್ನು ಚರ್ಚಿಸಲು ಮತ್ತು ಬಲಪಡಿಸಲು ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉಪಹಾರಕ್ಕೆ ಆಹ್ವಾನಿಸಿದ್ದೇನೆ’ ಎಂದು ತಿಳಿಸಿದ್ದರು.

ನ.29 ರಂದು ಹೈಕಮಾಂಡ್‌ ಸೂಚನೆಯಂತೆ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಅವರನ್ನು ಉಪಹಾರ ಸಭೆಗೆ ಆಹ್ವಾನಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News