ರಾಮ ಮಂದಿರ ನಿರ್ಮಾಣದ ದೇಣಿಗೆ ಹಣ ದುರ್ಬಳಕೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು: ಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಭಕ್ತಾಧಿಗಳು ನೀಡಿದ್ದ ದೇಣಿಗೆ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ ಕಳವಳಕಾರಿಯಾಗಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಆಗ್ರಹಿಸಿದ್ದಾರೆ.
ರವಿವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಡಿ.ಕೆ.ಶಿವಕುಮಾರ್, ರಾಮ ಮಂದಿರ ನಿರ್ಮಾಣಕ್ಕೆ ಭಾರತೀಯರು ಅಪಾರ, ಶ್ರದ್ದೆ ಹಾಗೂ ನಿಸ್ವಾರ್ಥ ಭಾವದಿಂದ ದೇಣಿಗೆಯನ್ನು ಸಮರ್ಪಿಸಿದ್ದಾರೆ. ಆ ನಂಬಿಕೆಗೆ ದ್ರೋಹ ಬಗೆಯುವುದು ಕೇವಲ ಸಾರ್ವಜನಿಕ ವಿಶ್ವಾಸಕ್ಕೆ ಬಗೆದ ದ್ರೋಹ ಮಾತ್ರವಲ್ಲ, ಧಾರ್ಮಿಕ ಮೌಲ್ಯಗಳಿಗೆ ಮಾಡಿದ ಅಪಚಾರವಾಗಿದೆ' ಎಂದು ಉಲ್ಲೇಖಿಸಿದ್ದಾರೆ.
ಪೂಜಾ ಸ್ಥಳಗಳು ಹಾಗೂ ಸಾರ್ವಜನಿಕ ದೇಣಿಗೆಗಳಿಗೆ ಸಂಬಂಧಿಸಿದ ವಿಷಯಗಳು ಪಾರದರ್ಶಕತೆ, ಹೊಣೆಗಾರಿಕೆಯಿಂದ ಕೂಡಿರಬೇಕು. ದೇಣಿಗೆ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಇದೀಗ ನಡೆಯುತ್ತಿರುವ ತನಿಖೆಯು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿರಬೇಕು. ಆಗ ಮಾತ್ರ ಭಕ್ತರಲ್ಲಿ ನಂಬಿಕೆ ಮೂಡಿಸಲು ಸಾಧ್ಯ. ಧಾರ್ಮಿಕ ನಂಬಿಕೆ ವೈಯಕ್ತಿಕ ಲಾಭಕ್ಕಾಗಿ ದುರುಪಯೋಗಪಡಿಸಬಾರದು ಎಂದು ಡಿ.ಕೆ.ಶಿವಕುಮಾರ್ ಪ್ರತಿಪಾದಿಸಿದ್ದಾರೆ.
The allegations of misappropriation of donations made by devotees for the Ram Temple in Ayodhya are deeply disturbing.
— DK Shivakumar (@DKShivakumar) June 28, 2026
These offerings were made with faith, devotion and sacrifice by millions of Indians. Every contribution represented trust in a sacred cause. Any breach of that…