ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರಕಾರ : ಸಿಎಂ ಡಿ.ಕೆ.ಶಿವಕುಮಾರ್

"ತಮಿಳುನಾಡು ಸಿಎಂ ಜತೆ ಸಭೆ ವಿಚಾರ: ಎಲ್ಲರೊಂದಿಗೆ ಮಾತನಾಡಲು ಸಿದ್ಧ"

Update: 2026-07-24 14:56 IST

ಬೆಂಗಳೂರು: “ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಸರಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ ಚರ್ಚೆ ನಡೆಸಲು ಮುಂದಾಗಿರುವುದು ಆಶಾದಾಯಕ ನಡೆ” ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬೆಂಗಳೂರು ಟೆಕ್ ಸಮ್ಮಿಟ್ ಸಿಇಒಗಳ ಉಪಹಾರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.

ಕೇಂದ್ರ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಶಿಕ್ಷಣದ ವಿಚಾರದ ಚರ್ಚೆಯ ಕುರಿತು ಕೇಳಿದಾಗ, “ಈಗ ಇಡೀ ದೇಶವೇ ಎಚ್ಚೆತ್ತುಕೊಂಡಿದೆ. ನಾವೆಲ್ಲರೂ ಈ ದೇಶದ ವಿದ್ಯಾರ್ಥಿ, ಯುವ ಜನರ ಭವಿಷ್ಯಕ್ಕಾಗಿ ಕೆಲಸ ಮಾಡುತ್ತಿದ್ದೇವೆ” ಎಂದರು.

ಎಲ್ಲರೊಂದಿಗೆ ಮಾತನಾಡಲು ಸಿದ್ಧ

ಕಾವೇರಿ ನದಿ ವಿಚಾರ ಸಂಬಂಧ ತಮಿಳುನಾಡು ಸಿಎಂ ಪತ್ರ  ಬಗ್ಗೆ ಕೇಳಿದಾಗ, “ನಾನು ಈಗ ಅದನ್ನು ಬಹಿರಂಗಪಡಿಸಲು ಬಯಸುವುದಿಲ್ಲ. ಈ ವಾರ ಸಚಿವ ಸಂಪುಟ ವಿಸ್ತರಣೆ ಮತ್ತು ಇತರೇ ವಿಷಯಗಳ ಕಾರ್ಯನಿರತವಾಗಿದ್ದೇವೆ. ಕೆಲವು ವಿಚಾರಗಳಲ್ಲಿ ನಾವು ಎಲ್ಲರೊಂದಿಗೆ ಮಾತನಾಡಲು, ಎಲ್ಲರೊಂದಿಗೆ ಹಂಚಿಕೊಳ್ಳಲು, ಎಲ್ಲರೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ” ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News