ಬರ ಪರಿಸ್ಥಿತಿ; ಕೇಂದ್ರ ಸರಕಾರ ನೆರವು ನೀಡುವ ನಿರೀಕ್ಷೆ ಇದೆ : ಸಿಎಂ ಡಿ.ಕೆ.ಶಿವಕುಮಾರ್

"ನಾಳೆ ದಿಲ್ಲಿಯಲ್ಲಿ ರಾಜ್ಯದ ಎಲ್ಲಾ ಸಂಸದರ ಸಭೆ ಕರೆಯಲಾಗಿದೆ"

Update: 2026-07-26 12:57 IST

ಬೆಂಗಳೂರು: "ಬರ ಪರಿಸ್ಥಿತಿಯಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಈ ಸಂಕಷ್ಟ ಸಮಯದಲ್ಲಾದರೂ ಕೇಂದ್ರ ನೆರವು ನೀಡುವ ನಿರೀಕ್ಷೆ ಇದೆ" ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನ ನೆಹರೂ ತಾರಾಲಯದ ರಾಷ್ಟ್ರೀಯ ಸೈನಿಕ ಸ್ಮಾರಕದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದರು.

ಸೋಮವಾರ ದಿಲ್ಲಿಯಲ್ಲಿ ಸಂಸದರ ಜೊತೆಗಿನ ಸಭೆ ಬಗ್ಗೆ ಕೇಳಿದಾಗ, "ರಾಜ್ಯದಲ್ಲಿನ ಬರ ಪರಿಸ್ಥಿತಿ, ಬಾಕಿ ಇರುವ ವಿವಿಧ ಯೋಜನೆಗಳು ಹಾಗೂ ಸಮಸ್ಯೆಗಳ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆದು ಧ್ವನಿ ಎತ್ತುವ ಬಗ್ಗೆ ಚರ್ಚೆ ಮಾಡಲು ನಾಳೆ ಸಂಜೆ ದಿಲ್ಲಿಯಲ್ಲಿ ರಾಜ್ಯದ ಎಲ್ಲಾ ಸಂಸದರ ಸಭೆ ಕರೆಯಲಾಗಿದೆ. ಸಭೆಯಲ್ಲಿ ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರೂ ಭಾಗಿಯಾಗಲಿದ್ದಾರೆ. ಬರ ಪರಿಸ್ಥಿತಿಯಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಈ ಸಂಕಷ್ಟ ಸಮಯದಲ್ಲಿ ಕೇಂದ್ರ ಸರಕಾರ ನೆರವು ನೀಡುವ ನಿರೀಕ್ಷೆ ಇದೆ. ಆಗಸ್ಟ್ 13 ರಿಂದ ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ" ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News