ನೂತನ ಸಚಿವರು ಆ. 3ರಂದು ಪ್ರಮಾಣ ವಚನ ಸ್ವೀಕರಿಸುವುದು ನಿಶ್ಚಿತ : ಸಿಎಂ ಡಿ.ಕೆ.ಶಿವಕುಮಾರ್
Update: 2026-08-01 00:02 IST
ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಸ್ಟ್ 3 ರಂದು ನಡೆಯಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸೇರುವವರ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ನೂತನ ಸಚಿವರು ಸೋಮವಾರ (ಆ. 3)ದಂದು ಪ್ರಮಾಣ ವಚನ ಸ್ವೀಕರಿಸುವುದು ನಿಶ್ಚಿತ ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಖಚಿತ ಆಗಿರುವುದರಿಂದಲೇ ಪ್ರಮಾಣ ವಚನಕ್ಕೆ ಲೋಕಭವನದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಹೇಳಿದ್ದೇನೆ' ಎಂದು ಅವರು ಹೇಳಿದರು.