ಬೆಂಗಳೂರು‌ : ರಾಜ್ಯದಲ್ಲಿನ ಬರ ಪರಿಸ್ಥಿತಿಗೆ ಕೇಂದ್ರ ಸರಕಾರ ಈವರೆಗೂ ಒಂದು ರೂಪಾಯಿ ನೆರವು ನೀಡಿಲ್ಲ. ಬೆಳಗಾವಿ ಅಧಿವೇಶನ ಮುಕ್ತಾಯದ ಒಳಗೆ ಕೇಂದ್ರ ಸರ್ಕಾರ ಪರಿಹಾರ ನೀಡದೇ ಇದ್ದರೆ, ಅಧಿವೇಶನ ಮುಗಿದ ಬಳಿಕ ದಿಲ್ಲಿ ಚಲೋ ಹೋರಾಟ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣ ಸಂಗಮದಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ವಿಚಾರವಾಗಿ ನಾವು ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದ್ದು, ಎಲ್ಲಾ ರೀತಿಯ ಹೋರಾಟ ಮಾಡುತ್ತೇವೆ ಎಂದರು.

ಕೇಂದ್ರ ಸರ್ಕಾರ ಬರ ಪರಿಹಾರ ನೀಡದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೀರಾ ಎಂದು ಕೇಳಿದಾಗ, “ಸುಪ್ರೀಂ ಕೋರ್ಟಿಗೂ ಹೋಗುತ್ತೇವೆ, ನಮ್ಮ ಸರ್ವ ಪಕ್ಷ ನಿಯೋಗ ಭೇಟಿಗೆ ಸಮಯ ನೀಡಿ ಎಂದು ಪ್ರಧಾನಮಂತ್ರಿಗಳಿಗೂ ಮನವಿ ಮಾಡಿದ್ದೇವೆ. ನಿಮ್ಮೆಲ್ಲರ ಎದುರು ಈ ವಿಚಾರವನ್ನು ಪ್ರಧಾನಮಂತ್ರಿಗಳ ಮುಂದೆ ಪ್ರಸ್ತಾಪಿಸಿದ್ದೇನೆ ಎಂದು ಹೇಳಿದರು.

ನಮ್ಮ ರಾಜ್ಯ ಹಾಗೂ ಕನ್ನಡಿಗರ ಸ್ವಾಭಿಮಾನದ ವಿಚಾರವಾಗಿ ಕನ್ನಡ ಧ್ವಜಕ್ಕೆ ಮಾನ್ಯತೆ ನೀಡುವ ವಿಚಾರವನ್ನು ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು. ಪರಿಶಿಷ್ಟರ ಮೀಸಲಾತಿ ವಿಚಾರದಲ್ಲಿ ಕೋರ್ಟ್ ನಲ್ಲಿ ಹಿನ್ನಡೆಯಾಗಿದ್ದು, ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಬೇಕು ಎಂಬುದು ನಮ್ಮ ಒಮ್ಮತದ ತೀರ್ಮಾನವಾಗಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಮೀರ್ ದಳಸನೂರು\ವಾರ್ತಾಭಾರತಿ

ಬೆಂಗಳೂರು ವರದಿಗಾರರು

ಸಮೀರ್ ದಳಸನೂರು ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪದವಿ ಪಡೆದಿದ್ದು, ದೂರದರ್ಶನದ ಚಂದನ ವಾಹಿನಿಯಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ, ಆಕಾಶವಾಣಿಯಲ್ಲೂ ಅರೆಕಾಲಿಕ ಸುದ್ದಿ ವಿಭಾಗದಲ್ಲಿ ಕಾರ್ಯ ನಿರ್ವಹಿಸಿರುವ ಅನುಭವ ಇದೆ. ಪ್ರಸ್ತುತ ಹಲವು ವರ್ಷಗಳಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.