ಮಾಜಿ ಶಾಸಕ ಬಿ‌.ಸಿ ನಾಗೇಶ್ ನಿಧನಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಸಂತಾಪ

Update: 2026-08-19 08:12 IST

ಬೆಂಗಳೂರು : ಮಾಜಿ ಶಾಸಕ, ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಅವರ ನಿಧನಕ್ಕೆ ಸಿಎಂ ಡಿ‌. ಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

"ಸರಳತೆಯಿಂದ ನಾಗೇಶ್ ಅವರು ಎಲ್ಲರ ಆಪ್ತರಾಗಿದ್ದರು.‌ ನೇರ ನಡೆ- ನುಡಿಗೆ ಹೆಸರಾಗಿದ್ದರು. ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಜನರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು. ಶಾಸಕರಾಗಿ ಹಾಗೂ ಶಿಕ್ಷಣ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಸ್ಮರಣೀಯ.

ಶಿಕ್ಷಣ ಕ್ಷೇತ್ರದ ಸುಧಾರಣೆ ಮತ್ತು ವಿದ್ಯಾರ್ಥಿಗಳ ಹಿತದ ಬಗ್ಗೆ ಅವರು ವಿಶೇಷ ಕಾಳಜಿ ಹೊಂದಿದ್ದರು. ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಸೌಹಾರ್ದಯುತ ಸಂಬಂಧ ಕಾಪಾಡಿಕೊಂಡಿದ್ದರು.

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ದುಃಖತಪ್ತ ಕುಟುಂಬದ ಸದಸ್ಯರಿಗೆ, ಬಂಧುಬಳಗಕ್ಕೆ ಹಾಗೂ ಅಪಾರ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ಮತ್ತು ಧೈರ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಮ್ಮ‌ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News