×
Ad

ಸಮಯಕ್ಕೆ ಸರಿಯಾಗಿ ಸಿಎಂ ಸಿದ್ದರಾಮಯ್ಯ ಆಗಮನ: ಕಕ್ಕಾಬಿಕ್ಕಿಯಾದ ಸಚಿವರು, ಅಧಿಕಾರಿಗಳು

Update: 2025-05-30 15:17 IST

ಬೆಂಗಳೂರು: ಊಟದ ಬಿಡುವಿಗಾಗಿ ನೀಡಿದ್ದ 30 ನಿಮಿಷಗಳ ವಿರಾಮದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಕ್ಲಪ್ತ ಸಮಯಕ್ಕೆ ಸಮ್ಮೇಳನ‌ ಸಭಾಂಗಣಕ್ಕೆ ಹಾಜರಾಗುವ ಮೂಲಕ ಅಧಿಕಾರಿಗಳನ್ನು‌ ಕಕ್ಕಾಬಿಕ್ಕಿಯಾಗಿಸಿದ ಘಟನೆ ಇಂದು ವಿಧಾನಸೌಧದಲ್ಲಿ ನಡೆದಿದೆ.

ಡಿಸಿ ಮತ್ತು ಸಿಇಒ ಗಳ ಸಭೆಗೆ ಮಧ್ಯಾಹ್ನ ಊಟದ ಬಿಡುವು 30 ನಿಮಿಷ ನೀಡಲಾಗಿತ್ತು. ಅಧಿಕಾರಿ ವರ್ಗಕ್ಕೆ ಮತ್ತು ಸಚಿವರುಗಳಿಗೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಮುಖ್ಯಮಂತ್ರಿಗಳು ಊಟಕ್ಕೆಂದು ಮನೆಗೆ ತೆರಳಿದ್ದರು.

ಸಿಎಂ ಮನೆಗೆ ಹೋಗಿದ್ದರಿಂದ ಅವರು ಊಟ ಮುಗಿಸಿ ಬರುವುದು ಲೇಟಾಗಬಹುದು ಎಂದು ಅಧಿಕಾರಿಗಳು ರಿಲಾಕ್ಸ್ ಮೂಡ್ ನಲ್ಲಿ ಊಟ ಮಾಡುತ್ತಿದ್ದರು. ಆದರೆ, ಮುಖ್ಯಮಂತ್ರಿಗಳು ಊಟ ಮುಗಿಸಿ ಸರಿಯಾಗಿ 30 ನಿಮಿಷಕ್ಕೆ ಸಮ್ಮೇಳನ‌ ಸಭಾಂಗಣಕ್ಕೆ ಆಗಮಿಸಿದರು. ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು, "ಸರ್ ಅಧಿಕಾರಿಗಳು ಇನ್ನೂ ಊಟಕ್ಕೆ ಹೋಗಿದ್ದಾರೆ ಸರ್, ಬರ್ತಾರೆ ಎಂದರು. ಮುಖ್ಯಮಂತ್ರಿಗಳು ಸರಿಯಾದ ಸಮಯಕ್ಕೆ ಬಂದ ಸುದ್ದಿ ಕೇಳಿ ಬ್ಯಾಂಕ್ವೆಂಟ್ ಹಾಲ್ ನಲ್ಲಿದ್ದ ಅಧಿಕಾರಿಗಳು, ಸಚಿವರು ತಡಬಡಾಯಿಸಿ ದೌಡಾಯಿಸಿದರು ಎಂದು ತಿಳಿದು ಬಂದಿದೆ.

ಊಟಕ್ಕೆ ಬಿಡುವು ಕೊಡುವಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು 45 ನಿಮಿಷ ಬಿಡುವು ಕೊಡೋಣ ಎಂದಿದ್ದರು. ಆದರೆ ಮುಖ್ಯಮಂತ್ರಿಗಳು ಅರ್ಧ ಗಂಟೆ ಸಾಕು ಎಂದು ಹೇಳಿದ್ದರು. ತಮ್ಮ ಸೂಚನೆಯಂತೆ ಮುಖ್ಯಮಂತ್ರಿಗಳು ಸರಿಯಾಗಿ 30 ನಿಮಿಷಕ್ಕೆ ಬಂದಿದ್ದು ಅಧಿಕಾರಿಗಳು, ಸಚಿವರನ್ನು ಕಕ್ಕಾಬಿಕ್ಕಿಯಾಗಿಸಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News