×
Ad

ಜೆಡಿಎಸ್‍ನಿಂದ ಉಚ್ಚಾಟನೆ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಸಿಎಂ ಇಬ್ರಾಹಿಂ

Update: 2023-12-21 20:38 IST

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮಕ್ಕಳ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುತ್ತಿದ್ದಂತೆ, ಉಚ್ಛಾಟಿತ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಮೆಟ್ಟಿಲೇರಿದ್ದು, ತಮ್ಮನ್ನು ಕಾನೂನು ಬಾಹಿರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ. 

ವಕೀಲ ಶತಬೀಶ್ ಹಾಗೂ ಶಿವಣ್ಣ ಮೂಲಕ ಸಿಎಂ ಇಬ್ರಾಹಿಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಅರ್ಜಿ ಕೋರ್ಟ್‍ನಲ್ಲಿ ವಿಚಾರಣೆಗೆ ಬರಬೇಕಿದೆ. ಅರ್ಜಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. 

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎನ್‍ಡಿಎ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ಸಂಬಂಧ ಡಿ.21ರಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಹಾಗೂ ಜೆಡಿಎಸ್ ಹಂಗಾಮಿ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. 

ಈ ವೇಳೆ ಮುಂದಿನ ಲೋಕಸಭಾ ಚುನಾವಣೆ ಸಂಬಂಧ ಮಹತ್ವದ ಚರ್ಚೆ ನಡೆಸಿದ್ದಾರೆ. ಆದರೆ, ಇತ್ತ ಇಬ್ರಾಹಿಂ ಜೆಡಿಎಸ್ ವರಿಷ್ಠರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News