×
Ad

ಮುಂಗಾರು ಆರಂಭ | ಬೀಜ-ಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಿ : ಅಧಿಕಾರಿಗಳಿಗೆ ಸಿಎಂ ಸೂಚನೆ

Update: 2024-05-21 20:09 IST

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೀಜ ಮತ್ತು ಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಬೀಜ ಮತ್ತು ಗೊಬ್ಬರಕ್ಕಾಗಿ ಹಾವೇರಿಯಲ್ಲಿ ರೈತರು ಸಾಲುಗಟ್ಟಿ ನಿಂತಿದ್ದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಆದುದರಿಂದ, ರೈತರು ಬೀಜ, ಗೊಬ್ಬರಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ತಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಬೀಜ, ಗೊಬ್ಬರದ ದಾಸ್ತಾನು ಕುರಿತು ಮಾಹಿತಿ ಪಡೆದುಕೊಳ್ಳಿ ಎಂದು ಚಲುವರಾಯಸ್ವಾಮಿಗೆ ಮುಖ್ಯಮಂತ್ರಿ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News