×
Ad

ಆರ್ಥಿಕ ತುರ್ತು ಪರಿಸ್ಥಿತಿ ಹೇರಲು ತುದಿಗಾಲಲ್ಲಿ ನಿಂತ ಸಿಎಂ : ಛಲವಾದಿ ನಾರಾಯಣಸ್ವಾಮಿ

Update: 2024-11-16 21:24 IST

ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿಯನ್ನು ಹೇರಲು ಆಲೋಚನೆ ಮಾಡಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಶನಿವಾರ ನಗರದ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಚುನಾವಣೆ ಬಂದ ಕಾರಣ ಅದನ್ನು ಮಾಡಿಲ್ಲ, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕೊಡಲು ಕಷ್ಟವೆಂದು ಅದನ್ನು ಮತ್ತೆ ಮುಂದೂಡಿದ್ದಾರೆ. ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿ ಆಗಿವೆ. ಆರ್ಥಿಕ ತುರ್ತು ಪರಿಸ್ಥಿತಿ ಹೇರಲು ಸಿಎಂ ತುದಿಗಾಲಿನಲ್ಲಿ ನಿಂತಿದ್ದಾರೆ ಎಂದು ದೂರಿದರು.

ಗ್ಯಾರಂಟಿ ವಿಚಾರದಲ್ಲಿ ದೇಶಕ್ಕೇ ಸುಳ್ಳು ಹೇಳುತ್ತಿದೆ. ಸರಕಾರವು ಕರ್ನಾಟಕದಲ್ಲಿ 5 ಗ್ಯಾರಂಟಿ ಕೊಡುತ್ತಿರುವುದಾಗಿ ಹೇಳಿದೆ. ಆದರೆ, ಮಹಾರಾಷ್ಟ್ರದಲ್ಲಿ, ರಾಂಚಿಯಲ್ಲಿ ಜಾಹೀರಾತು ಕೊಡುತ್ತಿದ್ದು, 10 ಗ್ಯಾರಂಟಿ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಇಲ್ಲಿ 5 ಕೊಡುವುದಾಗಿ ಹೇಳುತ್ತಿದ್ದು, ಜಾಹೀರಾತಿನಲ್ಲಿ 10 ಗ್ಯಾರಂಟಿಗಳು ಎಂದು ತೋರಿಸಿದ್ದಾರೆ ಎಂದು ಅವರು ಟೀಕಿಸಿದರು.

ಪಕ್ಷದವರಿಂದಲೇ ಖೆಡ್ಡಾ: ಸಿದ್ದರಾಮಯ್ಯನವರೇ, ನಿಮ್ಮ ವಿರೋಧಿಗಳು ನಿಮ್ಮ ಸುತ್ತಲೇ ಇದ್ದಾರೆ. ನಿಮ್ಮನ್ನು ಖೆಡ್ಡಾಕ್ಕೆ ಬೀಳಿಸಲು ಖೆಡ್ಡ ತೋಡಿದವರು ನಿಮ್ಮ ಪಕ್ಷದವರೇ ಇದ್ದಾರೆ. ನಿಮ್ಮನ್ನು ಕೆಳಗಿಳಿಸಲು ಕೋಟ್ಯಂತರ ರೂ.ಖರ್ಚು ಮಾಡುವವರು ನಿಮ್ಮ ಪಕ್ಕದಲ್ಲೇ ಇದ್ದಾರೆ ಎಂದು ನಾರಾಯಣಸ್ವಾಮಿ ಟೀಕಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News