×
Ad

ಕೆಪಿಎಸ್ಸಿ ಪರೀಕ್ಷೆ ಮುಂದೂಡುವುದಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟಣೆ

Update: 2024-08-24 18:35 IST

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಿಂದ(ಕೆಪಿಎಸ್ಸಿ) ಆ.27ಕ್ಕೆ ನಿಗದಿಪಡಿಸಿರುವ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಸಂಬಂಧಿಸಿದಂತೆ ಪೂರ್ವಭಾವಿ ಪರೀಕ್ಷೆ ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪರೀಕ್ಷೆಯ ಬಗ್ಗೆ ಯಾವುದೇ ರೀತಿಯ ಗೊಂದಲವಿಲ್ಲ. ಕೃಷ್ಣಜನ್ಮಾಷ್ಟಮಿಯಂದು ಇರುವ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ ಎಂದು ವಿವರಣೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News