×
Ad

ನಾಳೆ(ಜ.24) ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಸಿದ್ದರಾಮಯ್ಯ

Update: 2025-01-23 22:28 IST

ಬೆಂಗಳೂರು : ಇಲ್ಲಿನ ಅರಮನೆ ಮೈದಾನದ ಭೂಮಿಗೆ ಟಿಡಿಆರ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ವಿಚಾರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಅಧ್ಯಕ್ಷತೆಯಲ್ಲಿ ನಾಳೆ(ಜ.24) ಸಂಪುಟ ಸಭೆ ಕರೆಯಲಾಗಿದೆ.

ನಾಳೆ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿನ ಸಂಪುಟ ಸಭಾಮಂದಿರದಲ್ಲಿ ಸಂಪುಟ ಸಭೆ ನಡೆಯಲಿದೆ.

ಅರಮನೆ ಮೈದಾನದ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ರಾಜಮನೆತನ ಮತ್ತು ರಾಜ್ಯ ಸರಕಾರದ ನಡುವಿನ ತಿಕ್ಕಾಟ ನಡೆಯುತ್ತಿದೆ. ಈ ವಿಚಾರ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಬೇಕಾದ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕಿದೆ.

ನಾಳೆಯ ಸಂಪುಟ ಸಭೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಸರಕಾರ ಕೈಬಿಡುವ ಸಾಧ್ಯತೆ ಇದೆ. ರಸ್ತೆ ಅಗಲೀಕರಣ ವಿಚಾರದ ಹಿನ್ನೆಲೆಯಲ್ಲಿ ಇಡೀ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ಸರಕಾರ ನಿರ್ಧಾರ ಕೈಗೊಳ್ಳಲಿದ್ದು, ನಾಳೆಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಸುಪ್ರೀಂಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸುವ ಸಾಧ್ಯತೆಗಳಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News