×
Ad

ಬಜೆಟ್‌ ಮಂಡನೆಗೆ ಮುಖ್ಯಮಂತ್ರಿಗಳನ್ನು ವ್ಹೀಲ್ ಚೇರ್‌ನಲ್ಲಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

Update: 2025-03-07 11:27 IST

ಬೆಂಗಳೂರು : 2025-26 ನೇ ಸಾಲಿನ ಆಯವ್ಯಯ ಮಂಡನೆಗೆ ವಿಧಾನಸೌಧಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ವ್ಹೀಲ್ ಚೇರ್‌ನಲ್ಲಿ ಕರೆತಂದರು.

ಮಂಡಿನೋವಿನ ಕಾರಣ ಸಿದ್ದರಾಮಯ್ಯ ಅವರು ವಿಧಾನಸೌಧಕ್ಕೆ ಆಗಮಿಸಲು ವಿಶೇಷ ವ್ಯವಸ್ಥೆಯನ್ನು ಮಾಡಲಾಗಿದೆ.

ಸಂತೋಷ್‌ ಲಾಡ್‌ ಅವರು ಮುಖ್ಯಮಂತ್ರಿಗಳು ಕುಳಿತಿದ್ದ ವ್ಹೀಲ್ ಚೇರ್ ತಳ್ಳಿಕೊಂಡು ಬಂದರು. ವಸತಿ ಸಚಿವರಾದ ಜಮೀರ್ ಅಹ್ಮದ್‌ ಅವರು ಬಜೆಟ್ ಪ್ರತಿ ಹಿಡಿದುಕೊಂಡಿದ್ದರು. ಸಚಿವರಾದ ಎಚ್.ಸಿ. ಮಹದೇವಪ್ಪ, ಶರಣ ಪ್ರಕಾಶ ಪಾಟೀಲ್, ದಿನೇಶ್ ಗುಂಡೂರಾವ್ ಮತ್ತಿತರರು ಈ ವೇಳೆ ಮುಖ್ಯಮಂತ್ರಿಗಳ ಜತೆಗಿದ್ದರು.

ಸಿದ್ದರಾಮಯ್ಯ ಅವರು ಇಂದು ದಾಖಲೆಯ 16 ನೇ ಬಜೆಟ್‌ ಅನ್ನು ಮಂಡಿಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News