×
Ad

ಕೊಪ್ಪಳ ಅತ್ಯಾಚಾರ ಪ್ರಕರಣ | ರಾಜ್ಯದಲ್ಲಿ ಅಹಿತಕರ ಘಟನೆಗಳು ಮರುಕಳಿಸದಂತೆ ಕ್ರಮ : ಸಿದ್ದರಾಮಯ್ಯ

Update: 2025-03-08 19:18 IST

ಬೆಂಗಳೂರು : ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲ್‌ ಮಹಿಳೆ ಹಾಗೂ ಹೋಮ್‌ ಸ್ಟೇ ಒಡತಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಘಟನೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ. ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೇನೆ . ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದಿದ್ದಾರೆ.

ಏನಿದು ಘಟನೆ : ಪ್ರವಾಸಿ ತಾಣವಾದ ತಾಲೂಕಿನ ಸಣಾಪುರ ಗ್ರಾಮದಲ್ಲಿ ವಾಯುವಿಹಾರಕ್ಕೆಂದು ಹೊರಗೆ ಹೋಗಿದ್ದ ಸಂದರ್ಭದಲ್ಲಿ ವಿದೇಶಿಯರಿದ್ದ ಐವರ ಗುಂಪಿನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿ ವಿದೇಶಿ ಮಹಿಳೆ ಸಹಿತ ಇಬ್ಬರ ಮೇಲೆ ಅತ್ಯಾಚಾರ ಎಸಗಿದ್ದರು. ಅಲ್ಲದೆ, ಒರ್ವ ಪ್ರವಾಸಿಗನನ್ನು ಕಾಲುವೆ ನೂಕಿ ಹತ್ಯೆಗೈಯ್ಯಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಬಂದಿಸಿದ್ದು, ಓರ್ವ ಆರೋಪಿ ಪರಾರಿಯಾಗಿದ್ದಾನೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News