×
Ad

ಯೋಧರ ಕ್ಯಾಂಟೀನ್‍ಗಳಿಗೆ ಅಬಕಾರಿ ಸುಂಕ ವಿಧಿಸಲ್ಲ: ಸಿಎಂ ಸಿದ್ದರಾಮಯ್ಯ ಘೋಷಣೆ

Update: 2025-05-28 13:43 IST

ಬೆಂಗಳೂರು : ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ ʼಜೈ ಹಿಂದ್ ಸಭಾʼ ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋದ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಪುರಸ್ಕರಿಸಿ ಮಾತನಾಡಿದರು.

ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಎಂದರು.

ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಶ್ಲಾಘಿಸಿದರು.

ಸಿಎಂ ಮಹತ್ವದ ಘೋಷಣೆ :

ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಘೋಷಣೆ ಮಾಡಿದರು. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News