ಕನ್ನಡಕ್ಕೆ ದೀರ್ಘ ಇತಿಹಾಸವಿದೆ, ಅದು ಕಮಲ್ ಹಾಸನ್‍ಗೆ ಗೊತ್ತಿಲ್ಲ : ಸಿಎಂ ಸಿದ್ದರಾಮಯ್ಯ
Update: 2025-05-28 18:04 IST
ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಕನ್ನಡ ಭಾಷೆಗೆ ದೀರ್ಘ ಕಾಲದ ಇತಿಹಾಸವಿದೆ. ಪಾಪ ಕಮಲ್ ಹಾಸನ್ ಅವರಿಗೆ ಕನ್ನಡದ ಇತಿಹಾಸದ ಬಗ್ಗೆ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬುಧವಾರ ನಗರದ ಟೌನ್‍ಹಾಲ್‍ನಲ್ಲಿ ‘ತಮಿಳು ಭಾಷೆಯಿಂದ ಕನ್ನಡ ಹುಟ್ಟಿದೆ’ ಎಂಬ ನಟ ಕಮಲ್ ಹಾಸನ್ ಹೇಳಿಕೆ ವಿಚಾರದ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಕನ್ನಡ ಭಾಷೆಗೆ ಎರಡೂವರೆ ಸಾವಿರ ವರ್ಷಗಳಿಗೂ ಹೆಚ್ಚಿನ ಸುದೀರ್ಘವಾದ ಭವ್ಯ ಇತಿಹಾಸವಿದೆ. ಅದು ಕಮಲ್ ಹಾಸನ್‍ಗೆ ತಿಳಿದಿರುವಂತಿಲ್ಲ ಎಂದರು.