×
Ad

ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ಆರೆಸ್ಸೆಸ್‌ಗೆ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ

Update: 2025-06-28 17:36 IST

ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಆರೆಸ್ಸೆಸ್‌ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೆಡೆದ ಮೈಸೂರು ದಸರಾ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು.

ಆರೆಸ್ಸೆಸ್‌ ನ ದತ್ತಾತ್ರೇಯ ಹೊಸಬಾಳೆ ಅವರು ‘ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಬೇಕು’ ಎಂಬ ಹೇಳಿಕೆಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಆರೆಸ್ಸೆಸ್‌ನವರು ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಂವಿಧಾನ ಬದಲಾವಣೆಯಾಗಬೇಕು ಹಾಗೂ ಮನುಸ್ಮೃತಿ ಜಾರಿಯಾಗಬೇಕೆಂಬ ಮನಸ್ಥಿತಿ ಇರುವವರು. ಅದನ್ನು ಬಿಟ್ಟು ಅವರಿಗೆ ಇನ್ನೇನು ಹೇಳಲು ಸಾಧ್ಯ. ಸಂವಿಧಾನ ಶಾಸನ ಸಭೆಯಲ್ಲಿ ಚರ್ಚೆಯಾಗಿ ರಚನೆಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇದರ ಅಧ್ಯಕ್ಷರಾಗಿ ಸಂವಿಧಾನ ರಚಿಸಿದ್ದಾರೆ ಎಂದು ಹೇಳಿದರು.

ಜಾತ್ಯಾತೀತ ಮತ್ತು ಸಮಾಜವಾದ ಎಂಬ ಪದಗಳನ್ನು ನಂತರ ಸೇರಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸಂಸತ್ತಿನಲ್ಲಿ ಇದು ಚರ್ಚೆಯಾಗಿ ಸಂವಿಧಾನ ತಿದ್ದುಪಡಿ ಮಾಡಲಾಗಿದೆ. ಸಂವಿಧಾನ ದತ್ತಾತ್ರೇಯ ಹೊಸಬಾಳೆ ಅವರು ಹೇಳಿದಂತೆ ರಚನೆಯಾಗಿಲ್ಲ ಎಂದರು.

ಹುಲಿಗಳ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮ :

ಹುಲಿಗಳ ಸಾವಿನ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ತನಿಖೆ ಕೈಗೊಂಡು ಕೆಲವರನ್ನು ಬಂಧಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News