×
Ad

ಶಾಲಾ ಮಕ್ಕಳ ಕುಡಿಯುವ ನೀರಿಗೆ ಕೀಟನಾಶಕ ಬೆರೆಸಿದ ಪ್ರಕರಣ | ಯಾವ ಭಯೋತ್ಪಾದನಾ ಕೃತ್ಯಕ್ಕೂ ಕಡಿಮೆಯಿಲ್ಲ: ಸಿಎಂ ಸಿದ್ದರಾಮಯ್ಯ ಆಕ್ರೋಶ

Update: 2025-08-01 18:43 IST

 ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಅಭಿನಂದಿಸುತ್ತೇನೆ. ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ. ಈ ಬಗ್ಗೆ ಎಲ್ಲರೂ ಆತ್ಮವಿಮರ್ಷೆ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News