×
Ad

ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು : ಸಿಎಂ ಸಿದ್ದರಾಮಯ್ಯ

Update: 2025-11-25 17:50 IST

ಬೆಂಗಳೂರು : ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಮಂಗಳವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಶಾಸಕರ ಮತ್ತೊಂದು ತಂಡ ದಿಲ್ಲಿಗೆ ಭೇಟಿ ನೀಡಿರುವ ಬಗ್ಗೆ, ಹೈಕಮಾಂಡ್ ಅವರನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು.

ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ ಹಾರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು .

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News