×
Ad

ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇವೆ : ಸಿಎಂ ಸಿದ್ದರಾಮಯ್ಯ ಪುನರುಚ್ಚಾರ

"ನಾನು ಡಿಸಿಎಂ ಡಿ.ಕೆ.ಶಿವಕುಮಾರ್‌ ಸಹೋದರರ ರೀತಿ ಇದ್ದೇವೆ"

Update: 2025-12-02 13:19 IST

ಬೆಂಗಳೂರು : ʼಹೈಕಮಾಂಡ್‌ ಹೇಳಿದಂತೆ ಹಾಗೂ ರಾಹುಲ್‌ ಗಾಂಧಿ ಏನು ತೀರ್ಮಾನ ಮಾಡುತ್ತಾರೆ ಅದರಂತೆ ನಾವಿಬ್ಬರೂ ನಡೆದುಕೊಳ್ಳುತ್ತೇವೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಡಿ.ಕೆ.ಶಿವಕುಮಾರ್‌ ಮನೆಯಲ್ಲಿ ಉಪಹಾರದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ʼನಾಯಕತ್ವ ಬದಲಾವಣೆʼ, ಸಂಪುಟ ಪುನರ್‌ರಚನೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, "ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇವೆ. ನಾನು ಡಿಸಿಎಂ ಡಿ.ಕೆ.ಶಿವಕುಮಾರ್‌ ಸಹೋದರರ ರೀತಿ ಇದ್ದೇವೆ. ನಮ್ಮಿಬ್ಬರ ಸಿದ್ದಾಂತ ಕೂಡ ಒಂದೇ ಆಗಿದೆ. 2028ರ ಚುನಾವಣೆಯಲ್ಲಿ ಕೂಡ ನಾವು ಒಟ್ಟಿಗೆ ಕೆಲಸ ಮಾಡುತ್ತೇವೆ, ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆʼ ಎಂದು ನುಡಿದರು.

ವಿಪಕ್ಷವನ್ನು ಸರಕಾರ ಸಮರ್ಥವಾಗಿ ಎದುರಿಸಲಿದೆ :

ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ. ವಿಪಕ್ಷಗಳು ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ. ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು.

ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ :

ನಮ್ಮ ಸರಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ ನಿಗದಿಗೆ ಸಂಬಂಧಿಸಿದಂತೆ ಸರಕಾರ ರೈತರು, ರೈತ ಮುಖಂಡರು ,ಕಾರ್ಖಾನೆ ಮಾಲಿಕರ ಜೊತೆ ಚರ್ಚಿಸಿ, ಸಮಸ್ಯೆಯ ಪರಿಹಾರಕ್ಕೆ ಅಂತಿಮ ರೂಪವನ್ನು ನೀಡಲಾಗಿದೆ. ಕಬ್ಬು ಒಂದು ಟನ್ ಗೆ ಸರಕಾರದಿಂದ 50 ರೂ. ನಿಗದಿಪಡಿಸಲಾಗಿದೆ. ಮೆಕ್ಕೆ ಜೋಳ ಖರೀದಿಯ ಬಗ್ಗೆ ರೈತರು, ಡಿಸ್ಟಲರಿ ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಲಾಗಿದೆ. ಕೇಂದ್ರ ಸರಕಾರ ಮೆಕ್ಕೆಜೋಳಕ್ಕೆ 2,400 ರೂ.ಗಳನ್ನು ಬೆಂಬಲ ಬೆಲೆಯಾಗಿ ನಿಗದಿಪಡಿಸಿದೆ. ಆದರೆ ಮಾರುಕಟ್ಟೆ ದರ 1900 ರಿಂದ 2100 ರೂ.ವೆರೆಗಿರುವುದರಿಂದ ಡಿಸ್ಟಲರಿ ಕಂಪನಿಗಳು , ಎಂಎಸ್ ಪಿ ದರದಲ್ಲಿಯೇ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ. ಅಂತೆಯೇ ಪೌಲ್ಟ್ರಿ ಫಾರಂಗಳು , ಪಶುಆಹಾರಗಳಿಗಾಗಿ ಮೆಕ್ಕೆ ಜೋಳವನ್ನು ಬಳಸಲಾಗುತ್ತದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News