×
Ad

ಜಾತಿ ಗಣತಿ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸಹಮತ

Update: 2023-11-21 18:26 IST

ಬೆಂಗಳೂರು, ನ.21: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾಡುವ ಮೊದಲ ಕೆಲಸ ಜಾತಿ ಗಣತಿ ಪ್ರಕ್ರಿಯೆಗೆ ಚಾಲನೆ ನೀಡುವುದು. ಜಾತಿ ಗಣತಿ ನಡೆಸಿದಾಗಲೇ ಭಾರತ ಮಾತೆಗೆ ಜಯ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪೂರ್ಣ ಸಹಮತ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿರುವ ಅವರು, ನಮ್ಮ ಹೆಮ್ಮೆಯ ನಾಯಕ ರಾಹುಲ್ ಗಾಂಧಿ ನಿಲುವಿಗೆ ನನ್ನ ಪೂರ್ಣ ಸಹಮತವಿದೆ. ದೇಶಾದ್ಯಂತ ಜಾತಿಗಣತಿ ನಡೆದು, ಅದರ ವರದಿಯ ಆಧಾರದ ಮೇಲೆ ‘ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು’ ದಕ್ಕಿದಾಗಲೆ ದೇಶಕ್ಕೆ ದೊರೆತ ಸ್ವಾತಂತ್ರ್ಯ ಸಾರ್ಥಕವಾಗಲಿದೆ ಎಂಬುದು ನನ್ನ ಭಾವನೆ ಎಂದು ತಿಳಿಸಿದ್ದಾರೆ.

ನಮ್ಮ ಸರಕಾರದ ಹಿಂದಿನ ಅವಧಿಯಲ್ಲಿ ನಡೆಸಿದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಿ, ಅವಕಾಶಗಳಿಂದ ವಂಚಿತವಾದ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News