×
Ad

ಕೋಗಿಲು ಬಡಾವಣೆ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ | ʼಸೂಕ್ಷ್ಮತೆ-ಸಹಾನುಭೂತಿಯಿಂದ ಕ್ರಮ ಕೈಗೊಳ್ಳಬೇಕಾಗಿತ್ತುʼ : AICC ಕಳವಳ

ಸಿಎಂ-ಡಿಸಿಎಂ ಜೊತೆ ಮಾತುಕತೆ ನಡೆಸಿದ ಕೆ.ಸಿ.ವೇಣುಗೋಪಾಲ್

Update: 2025-12-27 23:24 IST

ಕೆ.ಸಿ.ವೇಣುಗೋಪಾಲ್/ಸಿದ್ದರಾಮಯ್ಯ

ಹೊಸದಿಲ್ಲಿ: ಬೆಂಗಳೂರು ನಗರದ ಕೋಗಿಲು ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿನ ತಮ್ಮ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಾನವೀಯ ಅಂಶವನ್ನು ಗಮನದಲ್ಲಿಟುಕೊಂಡು ಇಂತಹ ಒತ್ತುವರಿ ಕ್ರಮಗಳನ್ನು ಹೆಚ್ಚಿನ ಎಚ್ಚರಿಕೆ, ಸೂಕ್ಷ್ಮತೆ ಹಾಗೂ ಸಹಾನುಭೂತಿಯಿಂದ ಕೈಗೊಳ್ಳಬೇಕಾಗಿತ್ತು ಎಂಬ ಗಂಭೀರ ಕಳವಳವನ್ನು ಎಐಸಿಸಿ ವ್ಯಕ್ತಪಡಿಸಿದೆ ಎಂದು ತಿಳಿಸಿದ್ದಾರೆ.

ಧ್ವಂಸದಿಂದ ಸಂತ್ರಸ್ತ ಕುಟುಂಬಗಳ ಕುಂದುಕೊರತೆಗಳನ್ನು ವೈಯಕ್ತಿಕವಾಗಿ ಆಲಿಸಲಾಗುವುದು. ಸಮಸ್ಯೆಗಳ ಪರಿಹಾರಕ್ಕಾಗಿ ಸೂಕ್ತ ಕಾರ್ಯವಿಧಾನವನ್ನು ಜಾರಿಗೆ ತರುವುದರ ಜೊತೆಗೆ, ಪುನರ್ವಸತಿ ಹಾಗೂ ಪರಿಹಾರವನ್ನು ಖಚಿತಪಡಿಸಿಕೊಳ್ಳಲಾಗುವುದು ಎಂಬ ಭರವಸೆಯನ್ನು ರಾಜ್ಯ ಸರಕಾರ ನೀಡಿದೆ ಎಂದು ಕೆ.ಸಿ.ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News