×
Ad

ದಕ್ಷಿಣ ರಾಜ್ಯಗಳ ಡಿಜಿಪಿಗಳ ಸಮ್ಮೇಳನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Update: 2023-09-13 11:50 IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಕ್ಷಿಣ ಭಾರತದ ರಾಜ್ಯಗಳ ಪೊಲೀಸ್‌ ಮಹಾನಿರ್ದೇಶಕರ ಸಮನ್ವಯ ಸಮ್ಮೇಳನವನ್ನು ಉದ್ಘಾಟಿಸಿದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯದ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಮತ್ತು ದಕ್ಷಿಣ ಭಾರತದ ಇತರ ರಾಜ್ಯಗಳ ಪೊಲೀಸ್‌ ಮಹಾನಿರ್ದೇಶಕರು ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಕೇಂದ್ರ ಪೊಲೀಸ್ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಮತ್ತು ಎಲ್ಲಾ ದಕ್ಷಿಣ ರಾಜ್ಯಗಳ ಡಿಜಿಪಿಗಳ ನಡುವೆ ಸಮಾಜದ ಮೂಲಭೂತ ಅಂಶಗಳನ್ನು ಪ್ರಶ್ನಿಸುವ ನಿರ್ಣಾಯಕ ಆಂತರಿಕ ಭದ್ರತಾ ಸಮಸ್ಯೆಗಳ ವ್ಯಾಪ್ತಿಯ ನಿರ್ಣಯದ ಬಗ್ಗೆ‌ ಇಲ್ಲಿ ಚರ್ಚೆ ಜರುಗಲಿದೆ.

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News