×
Ad

ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡ ಮುಖಾಮುಖಿ

Update: 2023-10-08 22:00 IST

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ರವಿವಾರ ಇಲ್ಲಿನ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರು ದೇವೇಗೌಡ ಅವರನ್ನು ಅನಿರೀಕ್ಷಿತವಾಗಿ ಭೇಟಿಯಾದರು. ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ಹೊಸದಿಲ್ಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಮಂಗಳೂರಿಗೆ ತೆರಳಲು ಆಗಮಿಸಿದ್ದ ದೇವೇಗೌಡರು ಮತ್ತು ಅವರ ಧರ್ಮಪತ್ನಿ ಚನ್ನಮ್ಮ ಅನಿರೀಕ್ಷಿತವಾಗಿ ಮುಖಾಮುಖಿಯಾದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು. ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು. ಕೆಲ ಕಾಲ ಉಭಯ ನಾಯಕರಯ ಕುಶಲೋಪರಿ, ಮಾತುಕತೆ ಬಳಿಕ ಪರಸ್ಪರರು ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಉಪಸ್ಥಿತರಿದ್ದರು.

 



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News