×
Ad

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿ

Update: 2023-08-03 12:54 IST

ಹೊಸದಿಲ್ಲಿ, ಆ.3: ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು (ಗುರುವಾರ) ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾಗುತ್ತಿರುವುದು.

ಈ ವೇಳೆ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ಇನ್ನು ʼನಿಮ್ಮ ಸಮಯೋಚಿತ ಮಧ್ಯಸ್ಥಿಕೆ ದಸರಾ ಹಬ್ಬಕ್ಕೆ ಇನ್ನಷ್ಟು ರಂಗು ತುಂಬಲಿದೆ. ದೃಢವಾದ ಮತ್ತು ತ್ವರಿತ ಕ್ರಮಕ್ಕಾಗಿ ಎದುರುನೋಡುತ್ತಿದ್ದೇನೆʼ ಎಂದು ಮನವಿ ಪತ್ರದಲ್ಲಿ ಮುಖ್ಯಮಂತ್ರಿಗಳು ಉಲ್ಲೇಖಿಸಿದ್ದಾರೆ. 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News