×
Ad

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

Update: 2023-08-03 11:59 IST

ಬೆಂಗಳೂರು, ಆ.3: ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೌಹಾರ್ದ ಭೇಟಿ ಮಾಡಿ ಮಾತುಕತೆ ನಡೆಸಿದರು.

ಗುರುವಾರ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ಪೇಟ ತೊಡಿಸಿ, ಚಾಮುಂಡೇಶ್ವರಿಯ ಅಂಬಾರಿ ಹೊತ್ತ ಆನೆಯ ಶ್ರೀಗಂಧದ ಪ್ರತಿಕೃತಿಯನ್ನು ಉಡುಗೊರೆಯಾಗಿ ನೀಡಿದರು.

ಭೇಟಿ ವೇಳೆ ಸಿದ್ದರಾಮಯ್ಯ ಅವರು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಪ್ರಧಾನಿ ಮೋದಿ ಅವರ ಬಳಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವರಾದ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿ ಮಾಡಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News