×
Ad

ಆ.1ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸದಿಲ್ಲಿಗೆ ಪ್ರಯಾಣ

Update: 2025-07-29 18:38 IST

ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆ.1ರಂದು ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಆ.1ರ ಸಂಜೆ ಆರು ಗಂಟೆಗೆ ದಿಲ್ಲಿಯ ಐಟಿಸಿ ಮೌರ್ಯ ಹೋಟೆಲ್‍ನಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ‘ಬ್ರಿಡ್ಜ್ ಟು ಬೆಂಗಳೂರು’ ಕಾರ್ಯಕ್ರಮ ಆಯೋಜಿಸಲಾಗಿದೆ. ವಿವಿಧ ದೇಶಗಳ ರಾಯಭಾರಿಗಳು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಾಲ್ಗೊಳ್ಳುವರು.

ಆ.2ರ ಬೆಳಗ್ಗೆ 9.30ಕ್ಕೆ ಎಐಸಿಸಿ ಕಾನೂನು, ಮಾಹಿತಿ ಹಕ್ಕು ವಿಭಾಗ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ‘ಸಾಮಾಜಿಕ ನ್ಯಾಯ, ಡಾ.ಬಿ.ಆರ್.ಅಂಬೇಡ್ಕರ್ ಅವರ ದೃಷ್ಟಿಕೋನ’ ಕುರಿತಾದ ವಿಚಾರ ಸಂಕಿರಣದಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಮತ್ತಿತರರ ವರಿಷ್ಠರು ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಲಿದ್ದಾರೆ. ವಿಚಾರ ಸಂಕಿರಣದ ಉದ್ಘಾಟನೆಯ ಬಳಿಕ 11.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಕುರಿತಾಗಿ ಭಾಷಣ ಮಾಡಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News