×
Ad

ನಾಡಿನ ಹಿತರಕ್ಷಣೆಗಾಗಿ ಹೋರಾಡಿದ್ದ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ಸಿಎಂ ಕ್ರಮ

Update: 2023-10-20 19:11 IST

ಬೆಂಗಳೂರು, ಅ.20: ಹೋರಾಟಗಾರರ ಮೇಲಿನ ಪ್ರಕರಣಗಳ ಕಡತವನ್ನು ಸಂಪುಟ ಉಪ ಸಮಿತಿಯ ಮುಂದೆ ತಂದು ಅಗತ್ಯ ಕ್ರಮ ಕೈಗೊಂಡು, ಕ್ಯಾಬಿನೆಟ್ ಮುಂದೆ ತರುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಗಾಗಿ ನಡೆದಿದ್ದ ಹೋರಾಟಗಳಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಬರೆದಿದ್ದ ಪತ್ರವನ್ನಾಧರಿಸಿ ಮುಖ್ಯಮಂತ್ರಿ ಈ ಕ್ರಮ ಕೈಗೊಂಡಿದ್ದಾರೆ. ತಮ್ಮ ಮನವಿಗೆ ಶೀಘ್ರ ಸ್ಪಂದನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದಿನೇಶ್ ಗೂಳಿಗೌಡ ಧನ್ಯವಾದ ಸಲ್ಲಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News