ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು (credit: delhihighcourt.nic.in)

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಜಾರ್ಖಂಡ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ವರ್ಗಾವಣೆಗೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಇದೇ ವೇಳೆ, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ತ್ರಿಪುರಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಂ.ಎಸ್. ರಾಮಚಂದ್ರರಾವ್ ಅವರನ್ನು ವರ್ಗಾವಣೆ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.

ನವೆಂಬರ್ 24ರಂದು ನಡೆದ ಸುಪ್ರೀಂಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. 2025ರ ಜುಲೈ 19ರಿಂದ ನ್ಯಾಯಮೂರ್ತಿ ವಿಭು ಬಖ್ರು ಅವರು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor