×
Ad

ವಯನಾಡ್ ದುರಂತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ: ಸಿದ್ದರಾಮಯ್ಯ

Update: 2024-07-31 15:14 IST

ಬೆಂಗಳೂರು, ಜು.31: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ದುರಂತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಎಂದು ಮುಖ್ಯಮಂತ್ರಿ 'ಎಕ್ಸ್'ನಲ್ಲಿ ಬರೆದುಕೊಂಡಿದ್ದಾರೆ.

ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್. ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ. ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News