×
Ad

ವಸತಿ ಇಲಾಖೆಯಲ್ಲಿ ಹಗರಣ ಆರೋಪ: ಸಚಿವ ಝಮೀರ್ ಅಹ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು

Update: 2025-06-23 19:21 IST

ಬೆಂಗಳೂರು: ವಸತಿ ಮನೆಗಳ ಮಂಜೂರಾತಿಗೆ ಲಂಚ ಪಡೆಯುತ್ತಿರುವ ಪ್ರಕರಣವನ್ನು ವಿಶೇಷ ತನಿಖಾ ದಳದ ಮೂಲಕ ವಿಚಾರಣೆಗೊಳಪಡಿಸಲು ಆದೇಶಿಸಬೇಕು ಮತ್ತು ಆರೋಪಕ್ಕೆ ಗುರಿಯಾಗಿರುವ ಸಚಿವ ಝಮೀರ್ ಅಹ್ಮದ್ ವಿರುದ್ಧ ಅಭಿಯೋಜನೆಗೆ ಅವಕಾಶ ನೀಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ದೂರು ಸಲ್ಲಿಸಿದ್ದಾರೆ.

ರಾಜಪಾಲ ಥಾವರ್‍ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದು, ಶಾಸಕ ಹಾಗೂ ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ. ಲಂಚ ನೀಡಿದವರಿಗಷ್ಟೇ ಮನೆ ನೀಡಲಾಗುತ್ತಿದೆ ಎಂದು ಶಾಸಕರು ಹೇಳಿಕೆ ನೀಡಿದ್ದಾರೆ. ಇದು ನಿಜವೇ ಆಗಿದ್ದರೆ ಸಂವಿಧಾನದ ಉಲ್ಲಂಘನೆ ಮತ್ತು ಸಾರ್ವಜನಿಕ ಹಕ್ಕುಗಳ ಹರಣವಾಗುತ್ತದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಗಂಭೀರ ಸ್ವರೂಪದ ಅಪರಾಧವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅದು ಅಲ್ಲದೆ, ಬಡವರ ವಾಸಕ್ಕೆ ರಾಜೀವ್ ಗಾಂಧಿ ವಸತಿ ನಿಗಮ ಯೋಜನೆಯಡಿ ಮನೆಗಳನ್ನು ಮಂಜೂರು ಮಾಡಲು ಲಂಚ ಪಡೆಯುವುದಾದರೆ ನಾಗರಿಕರ ಹಕ್ಕುಗಳಿಗೆ ಧಕ್ಕೆಯಾಗುತ್ತದೆ. ರಾಜಕೀಯ ಪ್ರಭಾವ ಇಲ್ಲದ ಹಾಗೂ ಹಣ ನೀಡಲಾಗದವರು ವಸತಿ ಸೌಲಭ್ಯಗಳಿಂದ ವಂಚಿತರಾಗುತ್ತಾರೆ ಎಂದು ಹೇಳಿದ್ದಾರೆ.

ಈ ಸಂಬಂಧಿಸಿದಂತೆ ಭಾರತದ ಸಂವಿಧಾನ ಕಲಂ 153 ರಿಂದ 162 ಹಾಗೂ 163(1) ಅಡಿ ರಾಜ್ಯಪಾಲರು ಕ್ರಮ ತೆಗೆದುಕೊಳ್ಳಬೇಕು. ಸಚಿವರು ಸಾರ್ವಜನಿಕ ಹಿತಾಸಕ್ತಿಯ ವಿರುದ್ಧವಾಗಿ ನಡೆಯುತ್ತಿದ್ದು, ಹಣ ದುರುಪಯೋಗ, ಭ್ರಷ್ಟಾಚಾರದ ಆರೋಪಗಳಿಗೆ ಗುರಿಯಾಗಿದ್ದಾರೆ. ಅದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಆರೋಪಗಳನ್ನು ಏಕಪಕ್ಷೀಯವಾಗಿ ನಿರಾಕರಿಸುವುದು ಅಥವಾ ರಾಜಕೀಯ ದೃಷ್ಟಿಕೋನದಿಂದ ನೋಡುವುದು ಸಾಂವಿಧಾನಿಕ ವಿರೋಧಿ ನಡೆಯಾಗಿದೆ. ಸರ್ಕಾರದ ಅಂಗ ಸಂಸ್ಥೆಗಳೇ ಭ್ರಷ್ಟಾಚಾರಕ್ಕೆ ಸಿಲುಕಿರುವ ಆರೋಕ್ಕೆ ಗುರಿಯಾಗಿವೆ. ಹೀಗಾಗಿ ಸ್ವತಂತ್ರ್ಯ ಹಾಗೂ ನ್ಯಾಯಾತಕ ತನಿಖೆಯ ಅಗತ್ಯವಿದೆ. ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಬಲ್ಲ ಎಸ್‍ಐಟಿಯನ್ನು ಲೋಕಾಯುಕ್ತದ ಮೇಲ್ವಿಚಾರಣೆಯಲ್ಲಿ ನಿಯೋಜಿಸಿ ತನಿಖೆ ನಡೆಸಬೇಕು. ಭ್ರಷ್ಟಾಚಾರದ ಆಳ ಹಾಗೂ ಹಸ್ತಕ್ಷೇಪಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News