×
Ad

ಜೂ.30ರೊಳಗೆ ಜಿಬಿಎ ಚುನಾವಣೆ ಮುಗಿಸಿ: ಸರಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

Update: 2026-01-12 17:15 IST

ಬೆಂಗಳೂರು : ಗ್ರೇಟರ್​ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಯನ್ನು ಜೂನ್​ ಅಂತ್ಯದೊಳಗೆ ಮುಗಿಸಬೇಕು ಎಂದು ರಾಜ್ಯ ಸರಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್​ ಇಂದು(ಸೋಮವಾರ) ನಿರ್ದೇಶನ ನೀಡಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ ಐದು ನಗರ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಯನ್ನು ಜೂನ್​ 30 ರೊಳಗೆ ಪೂರ್ಣಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಗಡುವು ವಿಧಿಸಿ ಆದೇಶಿಸಿದ ಹೊರಡಿಸಿದೆ.

ಹಿಂದಿನ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಕೊನೆಯ ಬಾರಿಗೆ ಆಗಸ್ಟ್ 2015ರಲ್ಲಿ ನಡೆದಿತ್ತು. ಇದರ ಅವಧಿ ಸೆಪ್ಟಂಬರ್ 2020 ರಲ್ಲಿ ಕೊನೆಗೊಂಡಿತ್ತು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News