×
Ad

ಅಲ್ಪಸಂಖ್ಯಾತರ ಓಲೈಕೆಯಿಂದ ಮುಂದಿನ ಚುನಾವಣೆಯಲ್ಲಿ ಗೆಲ್ಲಬಹುದು ಎಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡುವುದಿಲ್ಲ: ಬಿ.ಎಸ್‌ ಯಡಿಯೂರಪ್ಪ

Update: 2023-12-06 16:20 IST

Photo: facebook

ಶಿವಮೊಗ್ಗ(ಡಿ.06):ಕೇವಲ ಅಲ್ಪಸಂಖ್ಯಾತರ ಓಲೈಕೆಯಿಂದ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಬಹುದು ಎಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿ ಮುಸ್ಲಿಂ ಸಮುದಾಯಕ್ಕೆ ಹಣ ನೀಡುವುದರಲ್ಲಿ ತಪ್ಪೇನಿಲ್ಲ, ಆದರೆ ಒಂದು ಸಮುದಾಯದ ಓಲೈಕೆಗೆ ಮುಂದಾಗಿರುವುದು ಸರಿಯಲ್ಲ ಈ ಬಗ್ಗೆ ಈಗಾಗಲೇ ಹಲವು ಮಠಾಧೀಶರು ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಬೆಳಗಾವಿ ಅಧಿವೇಶನದಲ್ಲಿ ಸಾವರ್ಕರ್ ಫೋಟೋ ತೆರವು ವಿಚಾರ ಬಗ್ಗೆ ಮಾತನಾಡಿದ ಅವರು ಈ ರೀತಿಯ ಕ್ರಮ ಸರಿಯಲ್ಲ ಈ ರೀತಿಯ ಪ್ರಯತ್ನಕ್ಕೆ ಯಾರೂ ಕೂಡ ಕೈ ಹಾಕಬಾರದು. ಅಲ್ಪಸಂಖ್ಯಾತರ ಓಲೈಕೆಯಿಂದ ಗೆಲ್ಲಬಹುದು ಎಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರು.

ಸೋಮಣ್ಣ ಪಕ್ಷ ಬಿಡುವ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ, ಸೋಮಣ್ಣ  ಅವರು ಎಲ್ಲಿಗೂ ಹೋಗುವುದಿಲ್ಲ ನಮ್ಮ ಪಕ್ಷದಲ್ಲೇ ಇರುತ್ತಾರೆ. ಅವರ ಜೊತೆ ನಾನು ಮಾತನಾಡುತ್ತೇನೆ ಎಂದು ಹೇಳಿದರು.

ಇನ್ನು ಬರಗಾಲ ಪರಿಹಾರ ಕೇಂದ್ರದಿಂದ ಬಂದಿಲ್ಲ ಎಂಬ ಕಾಂಗ್ರೆಸ್ ಆರೋಪದ ಕುರಿತು ಹೇಳಿಕೆ ನೀಡಿದ ಬಿಎಸ್ ವೈ, ಬರ ಪರಿಹಾರ ಕುರಿತು ಶೀಘ್ರದಲ್ಲೇ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಹಣ ಬಿಡುಗಡೆ ಮಾಡುವಂತೆ ಕೋರುತ್ತೇವೆ. ಆದರೆ ರಾಜ್ಯ ಸರ್ಕಾರ ಅದಕ್ಕೆ ಕಾಯದೆ ತನ್ನ ಪಾಲಿನ ಪರಿಹಾರ ನೀಡಲಿ. ಬರ ಎದುರಿಸುವ ನಿಟ್ಟಿನಲ್ಲಿ ಕ್ರಮ ಜರುಗಿಸಲಿ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News