ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭ
Update: 2026-05-30 16:58 IST
ಬೆಂಗಳೂರು : ಕಾಂಗ್ರೆಸ್ ಪಕ್ಷದ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭಗೊಂಡಿದೆ. ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಪ್ರಾರಂಭವಾಗಿದೆ.
ಸಭೆಯಲ್ಲಿ ಕಾಂಗ್ರೆಸ್ ಎಲ್ಲಾ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು, ರಾಜ್ಯಸಭಾ ಹಾಗೂ ಲೋಕಸಭಾದ ಬಹುತೇಕ ಸದಸ್ಯರು ಭಾಗಿಯಾಗಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಭೆಯಲ್ಲಿ ಉಪಸ್ಥಿತರಿದ್ದಾರೆ.