×
Ad

ಲೈಂಗಿಕ ದೌರ್ಜನ್ಯ ಆರೋಪ: ಕಾಂಗ್ರೆಸ್ ಪಕ್ಷದಿಂದ ಗುರಪ್ಪ ನಾಯ್ಡು ಉಚ್ಛಾಟನೆ

Update: 2024-11-30 19:29 IST

ಗುರಪ್ಪ ನಾಯ್ಡು

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪದ ಎದುರಿಸುತ್ತಿರುವ ಡಾ.ಗುರಪ್ಪ ನಾಯ್ಡುರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ಕೆಪಿಸಿಸಿ ಶಿಸ್ತುಕ್ರಮ ಸಮಿತಿ ಅಧ್ಯಕ್ಷ ಡಾ.ಕೆ.ರಹ್ಮಾನ್ ಖಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಲಾ ಶಿಕ್ಷಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News