×
Ad

ಸುಮಾರು 100 ಶಾಸಕರು ಸಿಎಂ ಬದಲಾವಣೆ ಪರವಾಗಿದ್ದಾರೆ: ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್

Update: 2025-07-01 17:48 IST

ಇಕ್ಬಾಲ್ ಹುಸೇನ್ / ಡಿ.ಕೆ. ಶಿವಕುಮಾರ್

ರಾಮನಗರ: ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶಾಸಕರೊಂದಿಗೆ ಸಭೆ ನಡೆಸುತ್ತಿದ್ದಾರೆ. ಈ ನಡುವೆ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಮತ್ತೆ ಸಿಎಂ ಬದಲಾವಣೆ ಕುರಿತು ಮಾತನಾಡಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ಈ ಅವಧಿಯಲ್ಲೇ ಮುಖ್ಯಮಂತ್ರಿಯಾಗಬೇಕು ಎಂದ ಶಾಸಕ ಇಕ್ಬಾಲ್ ಹುಸೇನ್, ಇದಕ್ಕೆ ಪಕ್ಷದಲ್ಲಿರುವ ಶಾಸಕರ ಬೆಂಬಲ ಇದೆ. ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕಷ್ಟೆ ಎಂದು ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಅವರು ಮುಖ್ಯಮಂತ್ರಿಯಾಗಬೇಕು ಎಂಬುದು ನಾನು ಸೇರಿದಂತೆ ಹಲವರ ಅಭಿಲಾಷೆಯಾಗಿದೆ.‌ ಹೈಕಮಾಂಡ್ ಅವರಿಗೂ ಒಂದು ಅವಕಾಶ ನೀಡಬೇಕು. ಡಿಕೆ ಶಿವಕುಮಾರ್ ಅವರು ತಳಮಟ್ಟದಿಂದ ಪಕ್ಷ ಸಂಘಟಿಸಿದ್ದಾರೆ. ಪೂರ್ಣ ಬಹುಮತದೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತರಲು ಅವರು ಕಾರಣಕರ್ತರಾಗಿದ್ದಾರೆ. ಸುಮಾರು 100 ಶಾಸಕರು ಸಿಎಂ ಬದಲಾವಣೆ ಪರವಾಗಿದ್ದಾರೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಬದಲಾವಣೆಯಾಗುವುದೆಂದರೆ ಕ್ರಾಂತಿಯಲ್ಲ, ಅದೊಂದು ಬದಲಾವಣೆಯಷ್ಟೆ ಎಂದೂ ಅವರು ಹೇಳಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಡಿ.ಕೆ. ಶಿವಕುಮಾರ್‌

ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈಬಲಪಡಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಶಾಸಕ ಇಕ್ಬಾಲ್‌ ಹುಸೇನ್​ ಗೆ ನೋಟಿಸ್ ನೀಡುತ್ತೇವೆ. ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಆಗಿರಲಿ‌, ಇನ್ನು ಮುಂದೆ ಯಾರೂ ಮಾಧ್ಯಮಗಳ ಮುಂದೆ ಹೋಗಬಾರದು ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News