ಸರಕಾರಿ ಭೂಮಿ ಮುಸ್ಲಿಮರ ಹೆಸರಿಗೆ ಮಾಡಿದ್ರೆ ನೇಣಿಗೆ ಹಾಕುವುದು ಗ್ಯಾರೆಂಟಿ : ಅಧಿಕಾರಿಗಳಿಗೆ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಬೆದರಿಕೆ
ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿರುವ ಶಾಸಕ ರಮೇಶ್ ಬಂಡಿಸಿದ್ದೇಗೌಡ
ಮಂಡ್ಯ : ಸರಕಾರಿ ಭೂಮಿಯನ್ನು ಸಾಬರ(ಮುಸ್ಲಿಮರ) ಹೆಸರಿಗೆ ಮಾಡಿದ್ರೆ, ಅಂತಹ ಅಧಿಕಾರಿಯನ್ನು ನೇಣಿಗೆ ಹಾಕುವುದು ಗ್ಯಾರೆಂಟಿ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಬೆದರಿಕೆ ಹಾಕಿದ್ದಾರೆ.
ಸರಕಾರಿ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಮುಸ್ಲಿಮರು ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿ ತಮ್ಮ ಹೆಸರಿಗೆ ಜಮೀನು ನೋಂದಣಿ ಮಾಡುವಂತೆ ಕೋರಿದ್ದರು.
ಮಹದೇವಪುರದಲ್ಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರ ಜೊತೆ ನಡೆದ ಸಭೆಯಲ್ಲಿ, ಮುಸ್ಲಿಮರಿಗೆ ಕಂದಾಯ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಖಾತೆ ಮಾಡಿಕೊಡುತ್ತಿದ್ದಾರೆ ಎಂದು ಕೆಲ ರೈತರು ದೂರು ನೀಡಿದ್ದಾರೆ ಎನ್ನಲಾಗಿದೆ.
ʼಜಮೀನು ಉಳುವವರು ನನ್ನ ಬಳಿ ಬಂದಿದ್ದರು. ನಾನು ದರ್ಖಾಸ್ತು ಮುಂದಕ್ಕೆ ನೋಡುವ, ಸಧ್ಯಕ್ಕೆ ಏನೂ ಮಾಡುವುದಕ್ಕೆ ಆಗಲ್ಲ ಎಂದು ಹೇಳಿದ್ದೇನೆ. ಸರಕಾರಿ ಭೂಮಿಯನ್ನು ಸಾಬರ(ಮುಸ್ಲಿಮರ) ಹೆಸರಿಗೆ ಮಾಡಿದ್ರೆ, ಅಂತಹವರನ್ನು ನೇಣಿಗೆ ಹಾಕುವುದು ಗ್ಯಾರೆಂಟಿ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಬೆದರಿಕೆ ಹಾಕಿದ್ದಾರೆ.
ಕಾಂಗ್ರೆಸ್ ಶಾಸಕ ಅಧಿಕಾರಿಗಳಿಗೆ ಬೆದರಿಕೆ ಹಾಕುವ ವೀಡಿಯೊ ಕೂಡ ವೈರಲ್ ಆಗಿದೆ. ಇದರ ಬೆನ್ನಲ್ಲೇ ಶಾಸಕನ ವಿರುದ್ಧ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.