×
Ad

ಕಾಂಗ್ರೆಸ್‌, ಎಂಎಲ್‌ ಸಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಜಗದೀಶ್‌ ಶೆಟ್ಟರ್

Update: 2024-01-25 13:52 IST

Photo: facebook/Jagadeeshshettar

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರಿದ್ದು, ವಿಧಾನ ಪರಿಷತ್‌ ಸಭಾಪತಿ ಬಸವರಾಜ್‌ ಹೊರಟ್ಟಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರಿಗೆ ರಾಜಿನಾಮೆ ಪತ್ರ ಬರೆಯುವ ಮೂಲಕ ಕಾಂಗ್ರೆಸ್‌ ಪಕ್ಷವನ್ನು ತೊರೆದಿದ್ದಾರೆ.

ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಕರ್ನಾಟಕ ವಿಧಾನಸಭಾ ಪರಿಷತ್‌ ಸದಸ್ಯತ್ವಕ್ಕೆ ನನ್ನ ಸ್ವಇಚ್ಛೆಯಿಂದ ರಾಜಿನಾಮೆ ನೀಡುತ್ತಿದ್ದೇನೆ ಎಂದು ಶೆಟ್ಟರ್ ಪತ್ರದ ಮೂಲಕ ತಿಳಿಸಿದ್ದಾರೆ.

ಗುರುವಾರ ದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಶೆಟ್ಟರ್, ಬಿಜೆಪಿ ಸೇರ್ಪಡೆಯಾಗುವುದಕ್ಕೆ ಒಪ್ಪಿದ್ದಾರೆ.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News