×
Ad

ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ‌: ಆರ್‌. ಅಶೋಕ್‌ ಆರೋಪ

Update: 2025-12-04 11:03 IST

PC: x.com/RAshokaBJP

ಬೆಂಗಳೂರು: 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ‌ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ಅವರು ಆರೋಪಿಸಿದ್ದಾರೆ

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರೇ, ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ, ಕರ್ನಾಟಕದಲ್ಲಿ ಶೇ. 63% ಭ್ರಷ್ಟಾಚಾರ ಇದೆ ಸ್ವತಃ ಮಾನ್ಯ ಉಪಲೋಕಾಯುಕ್ತರೇ ತಮ್ಮ ಘನ ಸರಕಾರಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಈಗೇನು ಹೇಳುತ್ತೀರಿ? ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೀರಾ? ಅಥವಾ ಇದೇ ಭಂಡ ಬಾಳು ಮುಂದುವರೆಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ಸುಳ್ಳು, ಅಪಪ್ರಚಾರ, ಕುತಂತ್ರದಿಂದ 136 ಸೀಟು ಪಡೆದ ಕಾಂಗ್ರೆಸ್ ಪಕ್ಷ, ಈಗ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿದರೆ, 36 ಸೀಟೂ ಬರುವುದಿಲ್ಲ. ಇದು ನನ್ನ ಗ್ಯಾರೆಂಟಿ ಎಂದು ಅಣಕಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News