×
Ad

ʼಹೀನಾಯ ಸೋಲಿನ ಬಳಿಕ ರಾಜ್ಯದ ಬಿಜೆಪಿ ನಾಯಕರನ್ನು ಹತ್ತಿರಕ್ಕೂ ಸೇರಿಸದ ಪ್ರಧಾನಿ ಮೋದಿ...ʼ ಎಂದು ಫೋಟೊ ಹಂಚಿಕೊಂಡ ಕಾಂಗ್ರೆಸ್‌

Update: 2023-08-26 11:05 IST

ಬೆಂಗಳೂರು, ಆ. 26: ಚಂದ್ರಯಾನ-3 ಯಶಸ್ಸಿಗಾಗಿ ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನಗರಕ್ಕೆ ಆಗಮಿಸಿದ್ದು, ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಸಚಿವ ಆರ್.ಅಶೋಕ್‌ ಸೇರಿದಂತೆ ಕೆಲವು ಬಿಜೆಪಿ ಶಾಸಕರು ರಸ್ತೆ ಬದಿ ನಿಂತು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ್ದಾರೆ. 

ಈ ಕುರಿತ ಫೋಟೊವನ್ನು ಟ್ವಿಟರ್‌ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್‌, ʼʼಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ..ʼʼ ಎಂದು ಬಿಜೆಪಿ ನಾಯಕರ ಕಾಲೆಳೆದಿದೆ. 

ʼʼರಾಜ್ಯ ಬಿಜೆಪಿಯ 'ದಂಡ'ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆʼʼ ಎಂದು ಕಾಂಗ್ರೆಸ್‌ ಟೀಕಿಸಿದೆ. 

ʼʼಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ. ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ?ʼʼ ಎಂದು ಕಾಂಗ್ರೆಸ್‌ ಕುಟುಕಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News